ಮಂಗಳೂರು:
ದ.ಕ.ಜಿಲ್ಲಾ ಫುಟ್ಬಾಲ್
ಸಂಸ್ಥೆಯ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ನಡೆಯುತ್ತಿರುವ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಪಂದ್ಯಾವಳಿಯ ಹೈಸ್ಕೂಲ್ ಬಾಲಕಿಯರ ವಿಭಾಗದಲ್ಲಿ ಬಜ್ಪೆಯ ಸೈಂಟ್ ಜೋಸೆಫ್ ಹೈಸ್ಕೂಲ್ ತಂಡ ಸತತ 11ನೇ ವರ್ಷ ಮತ್ತು
ಕಾಲೇಜು ಮಹಿಳೆಯರ ವಿಭಾಗದಲ್ಲಿ ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಕಾಲೇಜು ತಂಡಕ್ಕೆ ಪ್ರಶಸ್ತಿಯನ್ನು ಪಡೆದುಕೊಂಡಿತು.
ಫೈನಲ್
ಪಂದ್ಯದಲ್ಲಿ ನಗರದ ಮಣಿಪಾಲ ಸ್ಕೂಲ್ ತಂಡವನ್ನು 3-0 ಗೊಲುಗಳಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಲು ಅರ್ಹತೆ ಪಡೆಯಿತು. ಕಾಲೇಜು ಮಹಿಳೆಯರ ವಿಭಾಗದಲ್ಲಿ ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಕಾಲೇಜು ತಂಡ ಸೈಂಟ್ ಜೋಸೆಫ್ ಪದವಿ ಪೂರ್ವ ಕಾಲೇಜು ತಂಡವನ್ನು 1-0 ಗೋಲಿನಿಂದ ಸೋಲಿಸಿ ಪ್ರಶಸ್ತಿಗೆ ಅರ್ಹತೆ ಪಡೆದುಕೊಂಡಿತು.

Social Icons