ಇಂದೋರ್: ಸ್ನೇಹಿತನ ಹುಟ್ಟುಹಬ್ಬ ಕಾರ್ಯಕ್ರಮಕ್ಕೆ ತಡ ಆಗಬಾರದೆಂದು ಅತೀವೇಗದಲ್ಲಿ ತನ್ನ ಬಿಎಂಡಬ್ಲ್ಯೂ ಕಾರನ್ನು ಚಲಾಯಿಸುತ್ತಿದ್ದ ಯುವಕನೊಬ್ಬ ಇಬ್ಬರು ಮಹಿಳಾ ಸ್ಕೂಟರ್ ಸವಾರೆಯರನ್ನು ಬಲಿಪಡೆದಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ.
ಲಕ್ಷ್ಮಿ ತೋಮರ್ (24) ಹಾಗೂ ದೀಕ್ಷಾ ಜಡೋನ್ (25) ಕಾರು ಅಪಘಾತದಲ್ಲಿ ಮೃತಪಟ್ಟ ಯುವತಿಯರು. ಇವರಿಬ್ಬರು ಪ್ರಸಿದ್ಧ ಖಜ್ರಾನಾ ಗಣೇಶ ದೇವಾಲಯದ ಉತ್ಸವದಲ್ಲಿ ಪಾಲ್ಗೊಂಡು ತಮ್ಮ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದರು ಎನ್ನಲಾಗಿದೆ.
ಈ ವೇಳೆ ತನ್ನ ಸ್ನೇಹಿತನ ಹುಟ್ಟುಹಬ್ಬಕ್ಕೆ ತಡ ಆಗಬಾರದೆಂದು ಅತಿ ವೇಗದಲ್ಲಿ ಬಿಎಂಡಬ್ಲ್ಯೂ ಕಾರನ್ನು ಚಲಾಯಿಸುತ್ತಿದ್ದ ಗಜೇಂದ್ರ ಪ್ರತಾಪ್ ಸಿಂಗ್ (28) ಎಂಬಾತ, ಕಾರಿನ ಮೇಲೆ ನಿಯಂತ್ರಣ ಕಳೆದುಕೊಂಡು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ, ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ವೇಳೆ ಘಟನಾ ಸ್ಥಳದಿಂದ ಪರಾರಿಯಾಗಿದ್ದ ಚಾಲಕ ಗಜೇಂದ್ರ ಪ್ರತಾಪ್ ಸಿಂಗ್‌ನನ್ನು ಬಂಧಿಸಿರುವ ಪೊಲೀಸರು ಆತನ ವಿರುದ್ಧ ನಿರ್ಲಕ್ಷ್ಯದ ಚಾಲನೆ ಹಾಗೂ ಇನ್ನಿತರ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Social Icons