BANTWAL ACCIDENT: ಮದುವೆಯಾಗಿ ಎರಡೇ ದಿನದಲ್ಲಿ ಅಪಘಾತ, ನವವಧು ಸ್ಥಳದಲ್ಲೇ ಸಾವು, ವರ ಗಂಭೀರ

 

'

ಬಂಟ್ವಾಳ: ಹೊಸತಾಗಿ ಮದುವೆಯಾದ ಪತಿ, ಪತ್ನಿ ಕಾರಿನಲ್ಲಿ ಸಾಗುತ್ತಿದ್ದ ವೇಳೆ ಬಿ.ಸಿ.ರೋಡ್ ತಲಪಾಡಿ ಬಳಿ ಶನಿವಾರ ಅಪಘಾತಕ್ಕೀಡಾಗಿದೆ. ಇದರಿಂದ ಪತ್ನಿ ಸಾವನ್ನಪ್ಪಿದ್ದು, ಪತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ  ಬಂಟ್ವಾಳದ ತಲಪಾಡಿ ಎಂಬಲ್ಲಿ ಘಟನೆ ನಡೆದಿದೆ ನಡೆದಿದೆ. ಬಂಟ್ವಾಳ ತಾಲೂಕಿನ ಪೆರ್ನೆ ಸಮೀಪದ ವಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ  ಮಾನಸ ಸಾವನ್ನಪ್ಪಿದವರು.

ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

  ಬಿಸಿರೋಡಿನ ಕಡೆಯಿಂದಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ದಂಪತಿಯ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಸಹಪ್ರಯಾಣಿಕೆ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.‌ ಘಟನೆಯಿಂದ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

ಸೆ.5ರಂದು ದೇಂತಡ್ಕ ದೇವಸ್ಥಾನದಲ್ಲಿ ಇವರ ಮದುವೆ ನಡೆದಿತ್ತುಇಂದು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸು ಹೋಗುವ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆಸ್ಥಳಕ್ಕೆ ಮೆಲ್ಕಾರ್ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.