ಉಪ್ಪಿನಂಗಡಿ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಕಾಡಿಗೆ ಕರೆದೊಯ್ಸು ಅತ್ಯಾಚಾರ - ಪೊಕ್ಸೊ ಪ್ರಕರಣ ದಾಖಲು




ಉಪ್ಪಿನಂಗಡಿ: ಕಾಲೇಜು ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಆತರೋಪಿ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದೆ. 


ವಿಟ್ಲ ನಿವಾಸಿ ಸತೀಶ್ (38) ಪ್ರಕರಣದ ಆರೋಪಿ.


ನೆಲ್ಯಾಡಿಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಜೂ.14 ರಂದು ಪುತ್ತೂರಿನಲ್ಲಿ ಪರಿಚಯಿಸಿಕೊಂಡ ಆರೋಪಿ ಸತೀಶ್ ಫೋನ್ ನಂಬರ್ ಪಡೆದು ಸಂಪರ್ಕ ಸಾಧಿಸಿದ್ದ‌. ಬಳಿಕ ಆತ್ಮೀಯತೆ ಬೆಳೆಸಿದ ಈತ ಜು.21ರಂದು ಆಕೆಯನ್ನು ನೆಲ್ಯಾಡಿಗೆ ಬರಲು ಹೇಳಿದ್ದಾನೆ. ಅಲ್ಲಿಗೆ ಬಂದ ಆಕೆಯನ್ನು ಪಿಕಪ್ ವಾಹನದಲ್ಲಿ ಬಜತ್ತೂರು‌ಗ್ರಾಮದ ಕಾಂಚನ ಎಂಬಲ್ಲಿನ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಈ ವಿಚಾರವನ್ನು ಯಾರಿಗೂ ಹೇಳದಂತೆ ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಸಂತ್ರಸ್ತ ವಿದ್ಯಾರ್ಥಿನಿಯು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾಳೆ.


ಈ ಬಗ್ಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.