Manglore:- ಏಷ್ಯಾಟೆಕ್ ಶಿಕ್ಷಣ ಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ.

ಮಂಗಳೂರು/ದಕ್ಷಿಣ ಕನ್ನಡ

ಏಷ್ಯಾಟೆಕ್ ಶಿಕ್ಷಣ ಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಭಾರತೀಯ ಸೇನೆಯ ಮಾಜಿ ಹವಿಲ್ದಾರ್ ಶ್ರೀನಿ ವರ್ಗೀಸ್ ಅವರು ರಾಷ್ಟ್ರಧ್ವಜಾರೋಹಣ ಮಾಡಿ ಗೌರವ ಸಲ್ಲಿಸಿದರು. ಧ್ವಜಾರೋಹಣದ ನಂತರ ರಾಷ್ಟ್ರಗೀತೆ ಮೊಳಗಿದಾಗ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ದೇಶಭಕ್ತಿಯಿಂದ ನಿಂತು ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಅಲ್ವಿನ್ ವರ್ಗೀಸ್, ಆಡಳಿತಾಧಿಕಾರಿ ಶ್ರೀಮತಿ ಶಾಂತಿ, ಬೋಧಕ ಸಿಬ್ಬಂದಿ ಹಾಗೂ ಸೇರಿದಂತೆ ಅನೇಕ ವಿದ್ಯಾರ್ಥಿಗಳು,ಸಾರ್ವಜನಿಕರು ಹಾಜರಿದ್ದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾಜಿ ಸೈನಿಕ ಶ್ರೀನಿ ವರ್ಗೀಸ್ ಅವರು ಮಾತನಾಡಿ “ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮ ಮತ್ತು ದೇಶಭಕ್ತಿಯನ್ನು ಕಿರಿಯ ವಯಸ್ಸಿನಲ್ಲೇ ಅಳವಡಿಸಿಕೊಂಡು ಶಿಕ್ಷಣದಲ್ಲಿ ಪ್ರಗತಿ ಸಾಧಿಸಬೇಕು. ಭವಿಷ್ಯದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸುವ ನಾಗರಿಕರಾಗಿ ಬೆಳೆದು ಬರಬೇಕು” ಎಂದು ಪ್ರೇರಣಾದಾಯಕ ಸಂದೇಶ ನೀಡಿ ಶುಭ ಹಾರೈಸಿದರು.

ಕಾರ್ಯಕ್ರಮವನ್ನು ಶ್ರೀಮತಿ ಸಹನಾ ಅವರು ನಿರೂಪಿಸಿ, ಅತಿಥಿಗಳಿಗೆ ಸ್ವಾಗತ ಕೋರಿದರು.